ಪ್ರಮುಖ ಸುದ್ದಿ
ಜೆಡಿಎಸ್ ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್!
ವಿಜಯಪುರ: ರಾಜ್ಯ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ಜೆಡಿಎಸ್ ಪಕ್ಷದ ವಿಧಾನಸಭಾ ಚುನಾವಣೆ ಅಬ್ಯರ್ಥಿಗಳ ಪಟ್ಟಿ ಬಿಡಗಡೆ ಮಾಡಲು ನಿರ್ಧರಿಸಲಾಗಿದೆ. ಫೆಬ್ರವರಿ 17ಕ್ಕೆ ಬೆಂಗಳೂರಿನಲ್ಲಿ 120ರಿಂದ 130 ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯದ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುಮಾರು 5ಲಕ್ಷ ಜನರನ್ನು ಸೇರಿಸಿ ಸಮಾವೇಶ ಮಾಡಲಾಗುವುದು. ಸಾಮವೇಶದ ವೇಳೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷದ ಅಬ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.