ಪ್ರಮುಖ ಸುದ್ದಿ
ಪ್ರವಾಹ : ಒಂದು ತಿಂಗಳ ಸಂಬಳ ನೀಡ್ತಾರಂತೆ ಜೆಡಿಎಸ್ ಶಾಸಕರು!
ಬೆಂಗಳೂರು : ‘ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ನಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ.
ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಂತೆಯೇ ‘ಅನಾರೋಗ್ಯವಿದ್ದರೂ ಸಹ ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ. ಇಂದು ಬೆಳಗ್ಗೆಯಿಂದ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ’ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.