ಸಿದ್ಧರಾಮಯ್ಯ ನನ್ನ ಮೊದಲ ಶತೃ ಅಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ. ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯ ಅವರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಅಂತೆಯೇ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ್ದ ಕುಮಾರಸ್ವಾಮಿ ಬಿಜೆಪಿಗಿಂದ ಮೊದಲು ನಮಗೆ ಸಿದ್ಧರಾಮಯ್ಯ ಶತೃ ಎಂದು ಹೇಳಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದು ಆಡಳಿತ ಮಾಡಲು ಬಾರದವರು ಮನಸೋಇಚ್ಛೆ ಮಾತನಾಡುತ್ತಾರೆ ಎಂದಿದ್ದಾರೆ. ಅಲ್ಲದೆ ಸರ್ಕಾರಗಳನ್ನು ಬೀಳಿಸುವುಲ್ಲಿ ದೇವೇಗೌಡ, ಕುಮಾರಸ್ವಾಮಿ ನಿಸ್ಸೀಮರು. ನನ್ನನ್ನು ಶತೃ ಅಂದುಕೊಂಡದ್ದೇ ಮೊದಲ ತಪ್ಪು ಎಂದು ಸಿದ್ಧರಾಮಯ್ಯ ಗುಡುಗಿದ್ದಾರೆ.