ಪ್ರಮುಖ ಸುದ್ದಿ
ಮುಷ್ಕರ ಕೈಬಿಡುವಂತೆ ಸಾರಿಗೆ ನೌಕರರಿಗೆ ಕುಮಾರಸ್ವಾಮಿ ಮನವಿ
ಮುಷ್ಕರ ಕೈಬಿಡುವಂತೆ ಸಾರಿಗೆ ನೌಕರರಿಗೆ ಕುಮಾರಸ್ವಾಮಿ ಮನವಿ
ಬೆಂಗಳೂರಃ ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರವು ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುವದು ಸೂಕ್ತವಲ್ಲ. ಕೂಡಲೇ ನೌಕರರು ಮುಷ್ಕರ ವಾಪಸ್ ಪಡೆಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.
ಮಾಧ್ಯಕ್ಕೆ ಹೇಳಿಕೆ ನೀಡಿದ ಅವರು, ಕೋವಿಡ್ ನಿಂದಾಗಿ ಸರ್ಕಾರ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದೆ. ಈ ವೇಳೆ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಮುಷ್ಕರ ನಡೆಸುತ್ತಿರುವದು ಸರಿಯಲ್ಲ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಹೀಗಾಗಿ ಮುಷ್ಕರದಿಂದ ಹಿಂದೆ ಸರಿದು ಸೇವೆಗೆ ತೆರಳಬೇಕು ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ಸರ್ಕಾರವು ಸಾರಿಗೆ ನೌಕರರ ಬೇಡಿಕೆ ಆಲಿಸಬೇಕಿತ್ತು. ಅವರ ಸಮಸ್ಯೆ ಏನೆಂಬುದು ಚರ್ಚಿಸಿ ತಿಳಿದುಕೊಂಡು ಸೂಕ್ತ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವ ಕುರಿತು ಭರವಸೆ ನೀಡಬೇಕಿತ್ತು ಎಂದು ಅವರು ದೂರಿದರು.