ಪ್ರಮುಖ ಸುದ್ದಿ
ನಾಲೆಗಿಳಿದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್!
ಕೊಪ್ಪಳ : ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಕೆರೆಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಇಳಿದಿದೆ. ಪರಿಣಾಮ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸುಮಾರು 40 ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿದ್ದರು. ನಾಲೆಗಿಳಿದ ಬಸ್ ಹೊರತೆಗೆಯಲು ಪೊಲೀಸರು, ಅಗ್ನಿ ಶಾಮಕದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊಪ್ಪಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ..