ರಾಜ್ಯದಲ್ಲಿಂದು ಗುಡಗು ಮಿಂಚು ಸಹಿತ ಭಾರಿ ಮಳೆ : ಹವಮಾನ ಇಲಾಖೆ
ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.