ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ: ರಾಜ್ಯ ಹವಾಮಾನ ಇಲಾಖೆ

ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಯಲ್ಲಿ ಮುಂದಿನ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಒಳನಾಡಿನಲ್ಲಿ ಇಂದು ನಾಳೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು, ನಾಳೆ ಆರೆಂಜ್‌, ಜುಲೈ 22-23 ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಬೆಳಗಾವಿ ಬೀದರ್‌, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ 20-22ವರೆಗೆ ಯಲ್ಲೋ ಅಲರ್ಟ್‌ ಇದೆ ಎಂದಿದೆ.

Related Articles

Leave a Reply

Your email address will not be published. Required fields are marked *

Back to top button