ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವಂತಿಲ್ಲ- ಸರ್ಕಾರದಿಂದ ಖಡಕ್ ವಾರ್ನಿಂಗ್

ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವಂತಿಲ್ಲ- ಸರ್ಕಾರದಿಂದ ಖಡಕ್ ವಾರ್ನಿಂಗ್
ಬೆಂಗಳೂರು: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ಹಿಜಾಬ್ ಮತ್ತು ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಶಿಕ್ಷಣ ಸಚಿವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದರು. ಅವರು ಆಡ್ವಕೇಟ್ ಜನರಲ್ ಅವರೊಂದಿಗೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರೊಂದಿಗೂ ಚರ್ಚಿಸಿ ಸದ್ಯ ಸಮವಸ್ತ್ರ ಸಂಹಿತಿ ಅನ್ವಯ ಎಲ್ಲರೂ ಆಯಾ ಶಾಲಾ ಕಾಲೇಜು ಸೂಚಿಸಿದ ಸಮವಸ್ತ್ರ ಮಾತ್ರ ಧರಿಸಬೇಕು. ಅದು ಬಿಟ್ಟು ಕೆಸರು ಶಾಲಾಗಲಿ, ಹಿಜಾಬ್ ಆಗಲಿ ಧರಿಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತು ಸರ್ಕಾರ ಹೈಕೋರ್ಟ್ ಗೆ ಮನವರಿಕೆ ಮಾಡಲು ನಿರ್ಧರಿಸಿದ್ದು, ತೀರ್ಪು ಬರೋವರೆಗೂ ಎಲ್ಲರೂ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥಗಳಿಗೆ ಸೂಚಿಸಲಾಗಿದೆ ಎಂದು ಅಚಿವ ಬಿ.ಸಿ.ನಾಗೇಶ ಮಾಧ್ಯಮ ದ ಮುಂದೆ ಮಾಹಿತಿ ನೀಡಿದ್ದಾರೆ.