ವಾಹನ ಸವಾರರ ಗಮನಕ್ಕೆ : HSRP ನಂಬರ್ ಪ್ಲೇಟ್ ಅಳವಡಿಕೆಗೆ 24 ದಿನ ಮಾತ್ರ ಬಾಕಿ!

(H.S.R.P) ರಾಜ್ಯದ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸೆ. 15 ಕೊನೆಯ ದಿನಾಂಕವಾಗಿದೆ. ಅದರ ಒಳಗೆ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸಾರಿಗೆ ಸೂಚಿಸಿದೆ.
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ. ನೀವು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ.
ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯವಾಗಿದೆ.
24 ದಿನ ಮಾತ್ರ ಬಾಕಿ:
ಇನ್ನು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೇವಲ 24 ದಿನ ಮಾತ್ರ ಬಾಕಿ ಉಳಿದಿದ್ದು, ಅಂದರೆ ಸೆ.15 ಕೊನೆಯ ದಿನವಾಗಿದೆ. ಕೊನೆಯ ದಿನಾಂಕದೊಳಗಾಗಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಿ.