Homeಅಂಕಣಪ್ರಮುಖ ಸುದ್ದಿ

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್ ನ್ಯೂಸ್: ಜೂ. 12ರವರೆಗೆ ಕಾಲವಕಾಶ ನೀಡಿದ ಸರ್ಕಾರ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರು ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಪಾರಾಗಲಿದ್ದಾರೆ. ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜೂನ್ 12ರ ವರೆಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಸಿದ್ದಪಡಿಸುವ ಕಂಪನಿಗಳಲ್ಲಿ ಒಂದಾದ ಬಿಎನ್‌ಡಿ ಎನಾರ್ಜಿ ಲಿಮಿಟೆಡ್‌ ನಂಬರ್ ಫಲಕ ಅಳವಡಿಸಲು ವಿಧಿಸಿರುವ ಮೇ 31ರ ಗಡುವು ವಿಸ್ತರಿಸಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿತು.

ಜೂ.11ರಂದು ವಿಚಾರಣೆ: ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ರೋಬಿನ್ ಜೇಕಬ್, ಅರ್ಜಿ ವಿಚಾರಣೆ ಜೂನ್ 11ರಂದು ಪಟ್ಟಿಯಾಗಿದೆ. ಹೀಗಾಗಿ ಈ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಮನವಿ ಮಾಡಿದರು.

ಈ ವೇಳೆ ನ್ಯಾಯಪೀಠ, ಅಲ್ಲಿಯವರೆಗೂ ಕಾಲಾವಕಾಶ ನೀಡಬಹುದೇ? ಎಂದು ಪ್ರಶ್ನಿಸಿದರು. ಇದಕ್ಕೆ ಸರ್ಕಾರಿ ವಕೀಲರು, ಜೂನ್ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಭರವಸೆ ನೀಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Related Articles

Leave a Reply

Your email address will not be published. Required fields are marked *

Back to top button