ಪ್ರಮುಖ ಸುದ್ದಿ
ಅಕ್ರಮ ಸಂಬಂಧ ಹಿನ್ನೆಲೆ, ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿಹಾಕಿ ವ್ಯಕ್ತಿಯ ಕೊಲೆ.!
ಯಾದಗಿರಿಯಲ್ಲೊಂದು ಅಮಾನವೀಯ ಕೃತ್ಯ.!
ಯಾದಗಿರಿಃ ವಿವಾಹಿತ ಮಹಿಳೆಯೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿಹಾಕಿ ಮನ ಬಂಧಂತೆ ಥಳಿಸಿ ಕೊಲೆಗೈದ ಘಟನೆ ತಾಲೂಕಿನ ಹೊಸಹಳ್ಳಿ (ಕೆ) ಗ್ರಾಮದಲ್ಲಿ ನಡೆದಿದೆ.
ಇಸಾಕ್ (32) ಕೊಲೆಯಾದ ವ್ಯಕ್ತಿಯಾಗಿದ್ದು, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಇಸಾಕ್ ಗೆ ಮಹಿಳೆಯ ಗಂಡ, ಮಾವ ಮತ್ತು ಅತ್ತೆ ಸೇರಿ ಮನಬಂದಂತೆ ಥಳಿಸಿದ್ದಾರೆ. ಪೆಟ್ಟು ತಿಂದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಇಸಾಕ್ ನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಪರಿಣಾಮ ಆತ ಸ್ಥಳದಲ್ಲಿಯೇ ಅಸುನೀಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಗುರಮಿಠ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.