ಕಲಬುರಗಿ: ಆಂದೋಲಾ ಸ್ವಾಮೀಜಿ ಬಂಧಿಸಿದ್ದೇಕೆ?
ಕಲಬುರಗಿ: ಜೇವರಗಿ ತಾಲೂಕಿನ ಆಂದೋಲಾ ಗ್ರಾಮದಲ್ಲಿ ಇದೇ ಅಕ್ಟೋಬರ್ 14ರಂದು ಅಂಗಡಿ ತೆರವುಗೊಳಿಸುವ ವಿಚಾರದಲ್ಲಿ ಎರಡು ಕೋಮಿನ ಗುಂಪಿಗಳ ಮದ್ಯೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ನಸಿರುದ್ದೀನ್ ಎಂಬ ವ್ಯಕ್ತಿ ಗಾಯಗೊಂಡಿದ್ದ. ಈ ಬಗ್ಗೆ ಜೇವರಗಿ ಠಾಣೆಗೆ ದೂರು ನೀಡಿದ್ದ ನಸಿರುದ್ದೀನ್ ಘಟನೆಗೆ ಆಂದೋಲಾ ಗ್ರಾಮದ ಕರುಣೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರಚೋದನೆ ನೀಡಿದ್ದಾರೆ. ನನ್ನ ಮೇಲೆ ನಡೆದಿರುವ ಕೊಲೆ ಯತ್ನಕ್ಕೆ ಆಂದೋಲ ಸ್ವಾಮೀಜಿಗಳ ಕುಮ್ಮಕ್ಕಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.
ಕೊಲೆಯತ್ನ ಪ್ರಕರಣಕ್ಕೆ ಸಂಭಂಧಿಸಿದಂತೆ ಪೊಲೀಸರು ಇಂದು ಆಂದೋಲಾ ಗ್ರಾಮದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮ ಸೇನೆಯ ಕಾರ್ಯದ್ಯಕ್ಷರಾದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಮಠದ ಭಕ್ತರು ಹಾಗೂ ಆಂದೋಲಾಶ್ರೀಗಳ ಅಭಿಮಾನಿಗಳು, ಶ್ರೀರಾಮ ಸೇನೆ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದುರುದ್ದೇಶದಿಂದ ಆಂದೋಲಾಶ್ರೀಗಳನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮಠದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಸದ್ಯ ಆಂದೋಲಾ ಗ್ರಾಮದಲ್ಲಿ ಪರಿಸ್ಥಿತಿ ಬೂಧಿ ಮುಚ್ಚಿದ ಕೆಂಡದಂತಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಂದೋಲಾಶ್ರೀಗಳನ್ನು ಈ ಪ್ರಕರಣದಲ್ಲಿ ವಿನಾಕಾರಣ ಸಿಲುಕಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಮತ್ತು ಮಠದ ಭಕ್ತರು ಆರೋಪಿಸುತ್ತಿದ್ದಾರೆ. ಅಲ್ಲದೆ ನಾಳೆಯಿಂದ ಆಂದೋಲಾಶ್ರೀಗಳ ಬಿಡುಗಡೆಗೆ ಒತ್ತಾಯಿಸಿ ಹಾಗೂ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಲು ಹಿಂದೂಪರ ಸಂಘಟನೆಗಳ ಮುಖ್ಯಸ್ಥರು ಚಿಂತನೆ ನಡೆಸುತ್ತಿದ್ದಾರೆ.
#We_Are_With_Andola_Shree