ಪ್ರಮುಖ ಸುದ್ದಿ

ಇಂದು ಐಪಿಎಲ್‌ ಮ್ಯಾಚ್‌ – ಟ್ರಾಫಿಕ್‌ ಪೊಲೀಸ್‌ ಇಲಾಖೆಯಿಂದ ಮಹತ್ವದ ಮಾಹಿತಿ!

ಬೆಂಗಳೂರು : ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ ಪ್ರಕಟಣೆಯ ಮೂಲಕ ತಿಳಿಸಿದೆ. ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ. ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ. ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು ಸೆಂಟ್‌ ಜೋಸೆಫ್‌ ಸ್ಕೂಲ್‌ ಮೈದಾನ, ಯುಬಿ ಸಿಟಿ ಪಾರ್ಕಿಂಗ್, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್ ಕಿಂಗ್ಸ್ ರಸ್ತೆ, ಕಬ್ಬನ್‌ ಪಾರ್ಕ್‌ ಒಳಭಾಗ

Related Articles

Leave a Reply

Your email address will not be published. Required fields are marked *

Back to top button