ಮಹಿಳೆಯರೇ ಹುಷಾರ್ : ಮತ್ತೆ ಇರಾನಿ ಗ್ಯಾಂಗ್ ಭೀತಿ!?
ಬೆಂಗಳೂರು : ಮಹಿಳೆಯ ಕಣ್ಣಿಗೆ ಖಾರದಪುಡಿ ಎರಚಿ ಕೊರಳಲಿದ್ದ 1ಲಕ್ಷ ರೂಪಾಯಿ ಮೌಲ್ಯದ 38ಗ್ರಾಂ ಚಿನ್ನದ ಸರ ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಕೋಲಾರ ನಗರದ ಬಂಗಾರಪೇಟೆಯಲ್ಲಿ ಇಂದು ನಡೆದಿದೆ. ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಲಕ್ಷ್ಮೀದೇವಿ ಎಂಬ ಮಹಿಳೆಯನ್ನು ಹಿಂಬಾಲಿಸಿ ಬಂದು ಕೃತ್ಯವೆಸಗಿದ್ದಾರೆ. ಲಕ್ಷ್ಮೀದೇವಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಕೋಲಾರ ನಗರಠಾಣೆಯಲ್ಲಿ ಪಕರಣ ದಾಖಲಾಗಿದೆ.
ಇದು ಕೋಲಾರ ಗ್ರಾಮವೊಂದರಲ್ಲಿ ನಡೆದ ಘಟನೆ ಮಾತ್ರವಲ್ಲ. ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು , ಹಾವೇರಿ ಸೇರಿದಂತೆ ರಾಜ್ಯದ ವಿವಿದೆಡೆ ನಿತ್ಯ ಸರಗಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ಪೊಲೀಸು ಸರಗಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ಅಲ್ಲದೆ ಮತ್ತೆ ಇರಾನಿ ಗ್ಯಾಂಗ್ ರಾಜ್ಯಕ್ಕೆ ಕಾಲಿಟ್ಟಿದ್ದು ಮಹಿಳೆಯರು ಎಚ್ಚರಿಕೆಯಿಂದ ಇರುವಂತೆ ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದು ಅನುಮಾನ ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಕಳ್ಳರ ಬಂಧನಕ್ಕೆ ಸಾರ್ವಜನಿಕರು ಸಹಕಾರ ನೀಡಿ ಕಳ್ಳರನ್ನು ಜೈಲಿಗಟ್ಟಬೇಕಿದೆ.