ಪ್ರಮುಖ ಸುದ್ದಿ
ಸಿದ್ಧರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ದ್ವೇಷದ ರಾಜಕಾರಣ ಮಾಡಿಲ್ಲ -ಬಿಎಸ್ ವೈ
ಬೆಂಗಳೂರು: ಸದನ ಆರಂಭ ಆಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ಮತ ನಿರ್ಣಯ ಮಂಡಿಸಿದರು. ಇದೇ ವೇಳೆ ಮಾತನಾಡಿದ ಅವರು ಸಿದ್ಧರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದ ಕಾಲದಲ್ಲಿ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ನಾನು ಸಹ ದ್ವೇಷದ ರಾಜಕಾರಣ ಮಾಡುವುದಿಲ್ಲ. ರಾಜ್ಯದಲ್ಲಿ ಆಡಳಿತ ಯಂತ್ರ ಸರಿ ದಾರಿಗೆ ತಂದು ಉತ್ತಮ ಆಡಳಿತ ನೀಡುತ್ತೇನೆ. ಜನರ ಆಶೋತ್ತರದಂತೆ ಸರ್ಕಾರ ರಚಿಸಿದ್ದು ನನ್ನನ್ನು ದ್ವೇಷಿಸುವವರನ್ನೂ ಪ್ರೀತಿಸುವ ಮೂಲಕ ಉತ್ತಮ ಆಡಳಿತ ಮಂತ್ರವನ್ನೇ ಧ್ಯೇಯವನ್ನಾಗಿಸಿಕೊಂಡು ಮುನ್ನಡೆಯುತ್ತೇನೆ. ಈಗಾಗಲೇ ರೈತರಿಗೆ ಕೇಂದ್ರ ಸರ್ಕಾರದ ಯೋಜನೆ ಜತೆಗೆ ರೈತರಿಗೆ ವರ್ಷಕ್ಕೆ 4 ಸಾವಿರ ರೂ. ರಾಜ್ಯ ಸರ್ಕಾರದಿಂದ ನೀಡುವುದು. ನೇಕಾರರ 100 ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಸದನಕ್ಕೆ ತಿಳಿಸಿದರು.