ಪ್ರಮುಖ ಸುದ್ದಿ
ಏಮ್ಸ್ ನಿಂದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ
ನವದೆಹಲಿ: ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಶಕ್ತಿ , ಉಸಿರಾಟ ಸಮಸ್ಯೆ ಸೇರಿ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ಇಂದು ಬೆಳಗ್ಗೆ 11ಗಂಟೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯದ ಮಾಹಿತಿ ಪಡೆದಿದ್ದಾರೆ. ಬಳಿಕ ಏಮ್ಸ್ ಆಸ್ಪತ್ರೆ ವೈದ್ಯರು ಅರುಣ್ ಜೇಟ್ಲಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.