‘ಹೈದರಾಬಾದ್ ಕರ್ನಾಟಕದಲ್ಲಿ 45ಸಾವಿರ ಹುದ್ದೆಗಳು ಖಾಲಿ ಇವೆ!’
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರಕಾರ ಹೈದರಾಬಾದ್ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸುಮಾರು 45ಸಾವಿರ ಹುದ್ದೆಗಳು ಖಾಲಿ ಇವೆ. ಆದರೂ, ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿಲ್ಲ. ಆ ಮೂಲಕ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ವಿರೋಧ ಪಕ್ಷದ್ರ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸಂಡೂರು ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ವಿಪಕ್ಷ ನಾಯಕ ಜಗಧೀಶ್ ಶೆಟ್ಟರ್ ಪಾಲ್ಗೊಂಡಿದ್ದರು. ಸಂಸದ ಶ್ರೀರಾಮುಲು ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್ ರಾಜ್ಯದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆಯುತ್ತಿದೆ. ಆದರೂ ಸರ್ಕಾರ ಮಾತ್ರ ಕೈಕಟ್ಟಿ ಕುಳಿತಿದೆ. ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳು ಬೇಜವಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ತಕ್ಕ ಪಾಠ ಕಲಿಯಬೇಕಾಗತ್ತದೆ ಎಂದು ಎಚ್ಚರಿಸಿದರು.