Homeಪ್ರಮುಖ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದೆ. ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಇನ್ನು ಭಾರತೀಯ ಸೇನೆಯು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಸೇನೆ, ಇಂದು ಮುಂಜಾನೆ 3 ಗಂಟೆಗೆ ಬಟ್ಟಲ್ ಸೆಕ್ಟರ್‌ನಲ್ಲಿ ಉಗ್ರರು ನುಸುಳಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಸೋಮವಾರದಂದು ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರು. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರು ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದರು.

Related Articles

Leave a Reply

Your email address will not be published. Required fields are marked *

Back to top button