Homeಜನಮನಪ್ರಮುಖ ಸುದ್ದಿ

ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಓರ್ವ ಉಗ್ರ ಹತ; ಮೂವರು ಸೈನಿಕರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ (Encounter in Kupwara). ಘಟನೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

ಜಿಲ್ಲೆಯ ಕುಮ್ಕಾರಿ (Kumkari) ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್. ಇಲ್ಲಿ ಭಯೋತ್ಪಾದಕರ ದಂಡು ಬೀಡು ಬಿಟ್ಟಿದೆ ಎನ್ನುವ ಖಚಿತ ಮಾಹಿತಿ ಮೇರೆ ಸೈನಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿದ್ದು, ಇದನ್ನು ಮಟ್ಟ ಹಾಕಲು ಯೋಧರು ನಿರತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಈಗಾಗಲೇ ಹಲವು ಭಯೋತ್ಪಾದಕರು ಹತರಾಗಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button