ಪ್ರಮುಖ ಸುದ್ದಿ
ಜಯ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕ್ರಮ ರದ್ದು

ಡಿ.26 ರಂದು ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ರದ್ದು- ಕಟ್ಟಿಮನಿ
yadgiri, ಶಹಾಪುರಃ ಇದೇ ಡಿ.26 ರಂದು ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಕಾರಣಾಂತರಗಳಿಂದ ರದ್ದುಗೊಳಿಸಲಾಗಿದೆ ಎಂದು ಆಯೋಜಕರಾದ ಸೇನೆಯ ತಾಲೂಕು ಅಧ್ಯಕ್ಷರೂ ಆದ ಮಲ್ಲಿಕಾರ್ಜುನ ಕಟ್ಟಿಮನಿ (ಗುತ್ತೇದಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 26 ರಂದು ಸಂಜೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಅಲ್ಲದೆ ವಿವಿಧ ಸಾಧಕರಿಗೆ ಪ್ರಶಸ್ತಿ ಪುರಸ್ಕಾರವು ಏರ್ಪಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಇಡಿ ಕಾರ್ಯಕ್ರಮ ರದ್ದು ಪಡಿಸಲಾಗಿದ್ದು, ಸಾರ್ವಜನಿಕರಲ್ಲಿ ಕ್ಷಮಾಪಣೆ ಇರಲಿ ಎಂದು ಅವರು ತಿಳಿಸಿದ್ದಾರೆ. ತಾಯಿ ನೆಲ, ಜಲ, ಭಾಷೆಗಾಗಿ ಸೇವೆ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.