ಪ್ರಮುಖ ಸುದ್ದಿ
ಜೇವರಗಿ ಬಳಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ, ಇಬ್ಬರು ಸಾವು!
ಕಲಬುರಗಿ : ಜೇವರಗಿ ತಾಲೂಕಿನ ಹರವಾಳ ಗ್ರಾಮದ ಸಮೀಪ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಜೇವರಗಿ ನಿವಾಸಿಗಳಾದ ಪ್ರಾಣೇಶ್ ಕುಲಕರ್ಣಿ (27) ಮತ್ತು ಚೇತನಾ (24) ಎಂದು ಗುರುತಿಸಲಾಗಿದೆ. ನೆಲೋಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನೆಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.