ಪ್ರಮುಖ ಸುದ್ದಿ
ಬಾಲಕಿ ಮೇಲೆ ರೇಪ್ & ಕೊಲೆ ಕೇಸ್ : ಜೇವರ್ಗಿ ಬಂದ್ ಮಾಡಿ ದಲಿತ ಸಂಘಟನೆಗಳ ಆಕ್ರೋಶ
ಜೇವರ್ಗಿ: ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಕೃತ್ಯವನ್ನು ಖಂಡಿಸಿ ಇಂದು ದಲಿತಪರ ಸಂಘಟನೆಗಳು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಬಂದ್ ಗೆ ಕರೆ ನೀಡಿವೆ. ಹೀಗಾಗಿ, ಬೆಳಗ್ಗೆಯಿಂದಲೇ ಬೀದಿಗಿಳಿದ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ಆರಂಭಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದಲೇ ಜೇವರ್ಗಿ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ಆರಂಭಿಸಲಾಗಿದೆ. ಪ್ರತಿಭಟನಾಕಾರರು ಚಿಕ್ಕ ಜೇವರ್ಗಿ ಕ್ರಾಸ್ ನಲ್ಲಿ ಟೈರಿಗೆ ಬೆಂಕಿಯಿಟ್ಟು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರಿ ಬಸ್ ಸಂಚಾರ ಸ್ಥಗಿತವಾಗಿದ್ದ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು ಸಂಚಾರ ಅಸ್ತವ್ಯಸ್ಥ ಆಗಿದೆ. ಹೀಗಾಗಿ, ಪಟ್ಟಣದ ಬಹುತೇಕ ಶಾಲಾ ಕಾಲೇಜುಗಳು ಬಂದ್ ಆಗಿವೆ.