Homeಪ್ರಮುಖ ಸುದ್ದಿಮಹಿಳಾ ವಾಣಿಯೂತ್ ಐಕಾನ್ವಿನಯ ವಿಶೇಷ

ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಎಸ್ಸೆಸ್ಸೆಲ್ಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಸುವರ್ಣಾವಕಾಶವೊಂದು ನಿಮ್ಮನ್ನು ಹುಡುಕಿಕೊಂಡು ಬಂದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ. SSC Recruitment 2024 ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ, ವಿಶ್ವವಿದ್ಯಾನಿಯಯದಿಂದ ಎಸ್ಸೆಸ್ಸೆಲ್ಸಿ / 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಇನ್ನು ಹವಾಲ್ದಾರ್‌ ಹುದ್ದೆಗೆ 18-27 ವಯಸ್ಸಿನವರು ಅಪ್ಲೈ ಮಾಡಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 1೦ ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಪ್ರಾಥಮಿಕ ಅರ್ಹತಾ ಪರೀಕ್ಷೆ (Preliminary Eligibility Test), ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌ (Physical Standard Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 18,000 ರೂ. – 22,000 ರೂ. ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಮುಂತಾದೆಡೆ ಪರೀಕ್ಷಾ ಕೇಂದ್ರಗಳಿವೆ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

 

Related Articles

Leave a Reply

Your email address will not be published. Required fields are marked *

Back to top button