Homeಜನಮನಪ್ರಮುಖ ಸುದ್ದಿವಿನಯ ವಿಶೇಷ

ಇಂದು ದ್ವಿತೀಯ ಪಿಯುಸಿ ಪರೀಕ್ಷೆ 03 ಫಲಿತಾಂಶ ಪ್ರಕಟ!

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 03 ಫಲಿತಾಂಶವನ್ನು ಇಂದು ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ http//karresults.nic.in ವೆಬ್​​ ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್​ ಅಧಿಕಾರಿ ಎನ್​ ಮಂಜುಶ್ರೀ ತಿಳಿಸಿದ್ದಾರೆ.

ಜೂನ್​ 24ರಿಂದ ಜುಲೈ 05ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-03 ನಡೆಸಲಾಗಿತ್ತು. ಕರ್ನಾಟಕದ ನಾನಾ ಜಿಲ್ಲೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಬಳಿಕ ಮೌಲ್ಯಮಾಪನವೂ ಮಾಡಲಾಗಿತ್ತು ಇದೀಗ ನಾಳೆ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಫಲಿತಾಂಶ ನೋಡುವುದು ಹೇಗೆ? ಮೊದಲು, ಅಧಿಕೃತ ಕೆಎಸ್​​​​ಇಎಬಿ (KSEAB) ವೆಬ್‌ಸೈಟ್‌ಗೆ ಭೇಟಿ ನೀಡಿ. ಇತ್ತೀಚಿನ ಸುದ್ದಿ ವಿಭಾಗದಲ್ಲಿ 2ನೇ ಪಿಯುಸಿ ಪರೀಕ್ಷೆ 3 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್​ ಮಾಡಿ. ನೋಂದಣಿ ಸಂಖ್ಯೆ ಅಥವಾ ಜನ್ಮದಿನಾಂಕ ಮೂಲಕ ಪೋರ್ಟಲ್‌ಗೆ ಲಾಗ್ ಇನ್ ಮಾಡಿ. ಒಮ್ಮೆ ನೀವು ವಿವರಗಳನ್ನು ಸಲ್ಲಿಸಿದ ಬಳಿಕ ಕ್ಯಾಪ್ಚಾವನ್ನು ನಮೂದಿಸಿ ಸಬ್​​ಮಿಟ್​​ ಬಟನ್ ಅನ್ನು ಕ್ಲಿಕ್​ ಮಾಡಿ. ನಿಮ್ಮ 2ನೇ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶಗಳು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ. ತಮ್ಮ ಬಂದ ಅಂಕಗಳಿಂದ ಅತೃಪ್ತರಾದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಕಬಹುದಾಗಿದೆ. ಆದರೆ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬೇಕು. ಮರುಮೌಲ್ಯಮಾಪನ ಮತ್ತು ಮರು ಮೊತ್ತವನ್ನು ಮೇ 22 ರಿಂದ 25 ರವರೆಗೆ ಅವಕಾಶ ನೀಡಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button