ಕ್ಯಾಂಪಸ್ ಕಲರವ
ಜಿಲ್ಲಾ ಮಟ್ಟಕ್ಕೆ ಸೇಂಟ್ ಪೀಟರ್ ವಾಲಿಬಾಲ್ ತಂಡ
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸೇಂಟ್ ಪೀಟರ್ ವಾಲಿಬಾಲ್ ತಂಡ
ಯಾದಗಿರಿಃ ಜಿಲ್ಲೆಯ ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ನಡೆದ ಶಹಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಸೇಂಟ್ ಪೀಟರ್ ಶಾಲಾ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಯಿನಿ ಸಿಸ್ಟರ್ ರೀನಾ ಡಿಸೋಜಾ ತಿಳಿಸಿದ್ದಾರೆ.
ಮಕ್ಕಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ. ಮುಂದಿನ ಸ್ಪರ್ಧೆಯಲ್ಲೂ ಅವರು ವಿಜಯಿಯಾಗಲಿ ಎಂದು ಹಾರೈಸಿದರು.
ದೈಹಿಕ ಶಿಕ್ಷಕ ಶಿವಕುಮಾರ ಮಡ್ನಾಳ ಸೇರಿದಂತೆ ಶಾಲಾ ಶಿಕ್ಷಕ ವೃಂದ ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಮಕ್ಕಳು ಸಆಧನೆಗೈಯ್ಯಲಿ ಎಂದು ಶುಭಕೋರಿದರು.