ಪ್ರಮುಖ ಸುದ್ದಿ
ಕಾಳಿಂಗೇಶ್ವರ ದೇವಸ್ಥಾನ ಕಟ್ಟಡ ಲೋಕಾರ್ಪಣೆ
ಕಾಳಿಂಗೇಶ್ವರ ದೇವಸ್ಥಾನ ಕಟ್ಟಡ ಲೋಕಾರ್ಪಣೆ
ಕಲ್ಬುರ್ಗಿಃ ತಾಲೂಕಿನ ಕಾಳನೂರ ಗ್ರಾಮದಲ್ಲಿ ನಿರ್ಮಿಸಲಾದ ಕಾಳಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡವನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಕಾಳಿಂಗೇಶ್ವರ ಶ್ರೀದೇವರಿಗೆ ಮಂಗಳಾರತಿ ಮಾಡುವ ಮೂಲಕ ಭಕ್ತಿ ನಮನಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಶಾಸಕ, ಕಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕರ್ ಮತ್ತು ಕಲ್ಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮುತ್ತಿಮಡು, ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ನರಿಬೋಳ ಇತರರಿದ್ದರು.