ಪ್ರಮುಖ ಸುದ್ದಿ
ಭೀಕರ ಅಪಘಾತ : ನಾಲ್ವರ ಸಾವು, ಐವರಿಗೆ ಗಾಯ!
ಬೆಂಗಳೂರು: ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು ಐವರು ಗಾಯಗೊಂಡಿದ್ದಾರೆ. ನಂದಿಬೆಟ್ಟದಲ್ಲಿ ಸೂರ್ಯೋದಯ ನೋಡುವದಕ್ಕಾಗಿ ವೇಗವಾಗಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಮೂಲದ ರಮೇಶ, ಗೌರೀಶ, ಅಶೋಕ ಹಾಗೂ ಮಂಜುನಾಥ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.