ಬಾಲಕಿ ಮೇಲೆ ರೇಪ್ & ಮರ್ಡರ್ ಕೇಸ್ : ವಿವಿಧ ಸಂಘಟನೆಗಳಿಂದ ಕಲಬುರಗಿ ಬಂದ್
ಕಲಬುರಗಿ: ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯವನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆಯಿಂದಲೇ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನರ ಆರಂಭಿಸಿದ್ದಾರೆ. ನಗರದ ಬಸ್ ನಿಲ್ದಾಣದ ಎದುರಿ ಟೈರಿಗೆ ಬೆಂಕಿಯಿಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಜಾಗೂ ಬಿಜೆಪಿ, ಆರ್.ಎಸ್.ಎಸ್ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಾಮುಕರಿಗೆ ಪಾಠ ಕಲಿಸುವಂತೆ ಆಗ್ರಹಿಸಿದ್ದಾರೆ. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದ್ದು ವಾಹನ ಸಂಚಾರ ವಿರಳವಾಗಿದೆ. ಮದ್ಯಾನದ ಹೊತ್ತಿಗೆ ಮತ್ತಷ್ಟು ಪ್ರತಿಭಟನಾಕಾರರು ಬೀದಿಗಿಳಿಯುವ ಸಾಧ್ಯತೆಯಿದ್ದ ಬಂದ್ ಬಿಸಿ ಏರುವ ಲಕ್ಷ್ಮಣವಿದೆ.
ಕೆಲ ಖಾಸಗಿ ವಿದ್ಯಾಸಂಸ್ಥೆಗಳು ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಜಿಲ್ಲಾಡಳಿತ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಹೀಗಾಗಿ, ಕೆಲವು ಕಡೆ ವಿದ್ಯಾರ್ಥಿಗಳು ಸಕಾಲಕ್ಕೆ ಬಸ್ ಸಿಗದೆ ಪರದಾಡುತ್ತಿರುವುದು ಕಂಡು ಬಂದಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 3 ಕೆಎಸ್ ಆರ್ ಪಿ ತುಕಡಿ, 12 ಸಶಸ್ತ್ರ ಮೀಸಲು ಪಡೆ ಸೇರಿ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ಬೆಳಗ್ಗೆಯಿಂದಲೇ ನಗರದಲ್ಲಿ ಸುತ್ತುವರೆಯುತ್ತಿದ್ದು ತೀವ್ರ ನಿಗಾವಹಿಸಿದ್ದಾರೆ.