ಪ್ರಮುಖ ಸುದ್ದಿ
ಕಲಬುರ್ಗಿ ಕೊರೊನಾ ಎಫೆಕ್ಟ್ಃ ಮದ್ಯ ಮಾರಾಟ ನಿಷೇಧ
ಕೊರೊನಾ ಎಫೆಕ್ಟ್ಃ ಮದ್ಯ ಮಾರಾಟ ನಿಷೇಧ
ಕಲಬುರ್ಗಿಃ ನಗರದಲ್ಲಿ ಕೊರೊನಾ ವೈರಸ್ ಸೋಂಕಿನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಶರತ್ ಬಿ, ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಬಾರ್ ಆಂಡ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಿದ್ದಾರೆ ಎನ್ನಲಾಗಿದೆ.
ಇದೇ ಮಾ.15 ರ ಮಧ್ಯರಾತ್ರಿಯಿಂದ ಮುಂದಿನ ಆದೇಶದವರೆಗೆ ಜಾರಿಗೆ ಬರುವಂತೆ ಅವರು ಆದೇಶಿಸಿದ್ದಾರೆ ಎನ್ನಲಾಗಿದೆ.