ಪ್ರಮುಖ ಸುದ್ದಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ : ಸಿಎಂ ಯಡಿಯೂರಪ್ಪ

ಕಲಬುರಗಿ : ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಅಧಿಕೃತವಾಗಿ ಘೋಷಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸೆಕ್ರಟರಿಯೇಟ್ ಆರಂಭಿಸಿ ಹೆಚ್ಚಿನ ಅನುದಾನ ನೀಡುವುದಾಗಿ ತಿಳಿಸಿದರು. 371 ಜೆ ವಿಧಿಯಡಿಯ ಸಕಲ ಸವಲತ್ತುಗಳನ್ನು ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಅದಕ್ಕೂ ಮುನ್ನ ಸರ್ದಾರ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button