ಪ್ರಮುಖ ಸುದ್ದಿ
ಗುರುಮಠಕಲ್ ಜೆಡಿಎಸ್ ಶಾಸಕ ಕಂದಕೂರಗೆ ಕೊರೊನಾ ದೃಢ
ಯಾದಗಿರಿಃ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಮತ್ತು ಆವರ ಹಿರಿಯ ಸುಪುತ್ರ ಮಲ್ಲಿಕಾರ್ಜುನ ರಡ್ಡಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಶಾಸಕರ ಕಿರಿಯ ಮಗ ಶರಣಗೌಡ ಕಂದಕೂರ ಫೇಸ್ ಬುಕ್ ನಲ್ಲಿ ತಮ್ಮ ತಂದೆಯವರಿಗೂ ಹಾಗೂ ಸಹೋದರನಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಸಂಪರ್ಕದಲ್ಲಿರುವ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿಿದ್ದಾರೆ.
ಪಾಸಿಟಿವ್ ಬಂದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಒಂದು ವೇಳೆ ನೆಗೆಟಿವ್ ಬಂದಲ್ಲಿ ಹೋಂ ಕ್ವಾರಂಟೈನ್ ಇರುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಕ್ಷೇತ್ರದ ಜನತೆಯ ಆಶೀರ್ವಾದದಿಂದ ತಂದೆ ಹಾಗೂ ಸಹೋದರ ಬಹುಬೇಗ ಗುಣಮುಖವಾಗಿ ಬರಲಿದ್ದಾರೆ ಎಂದು ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.