ಪ್ರಮುಖ ಸುದ್ದಿ
ಕಾಂಗ್ರೆಸ್ ಗೆ ಗುಡ್ ಬೈ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಕಪಿಲ್ ಸಿಬಲ್
ಎಸ್.ಪಿ.ಕೈ ಹಿಡಿದ ಕಪಿಲ್ ಸಿಬಲ್
ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕಪಿಲ್ ಸಿಬಲ್
ಹಿರಿಯ ನಾಯಕ ಕಪಿಲ್ ಸಿಬಲ್ ಕೈಗೆ ಗುಡ್ ಬೈ
ವಿವಿ ಡೆಸ್ಕ್ಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ಮೇ.16 ರಂದೇ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇಂದು ಸಮಾಜವಾದಿ ಪಕ್ಷದಿಂದ ರಾಜ್ಯಸಭೆ ಕಣಕ್ಕೆ ಇಳಿದಿರುವ ಬೆಳವಣಿಗೆ ನಡೆದಿದೆ.
ಈಗಾಗಲೇ ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿರುವ ಕಪಿಲ್ ಸಿಬಲ್ ಸಮಾಜವಾದಿ ಪಕ್ಷದಿಂದ ರಾಜ್ಯಸಭೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಬೆಳವಣಿಗೆ ನಡೆದಿದೆ.
ಈಚೆಗೆ ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದ ಅವರು, ಕಾಂಗ್ರೆಸ್ ಉಳಿವಿಗಾಗಿ ಸಭೆಯಲ್ಲಿ ಸಾಕಷ್ಟು ಬಾರಿ ಗಾಂಧಿ ಕುಟುಂಬದ ನಾಯಕತ್ವ ಕುರಿತು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ.