ಇಂದು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಇಂದು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜೂನ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಪುತ್ತೂರು, ಶಿರಹಟ್ಟಿ, ಉಪ್ಪಿನಂಗಡಿ, ಗುಂಡ್ಲುಪೇಟೆ, ಗೋಕರ್ಣ, ಚನ್ನಪಟ್ಟಣದಲ್ಲಿ ಮಳೆಯಾಗಿದೆ.
ಕುಮಟಾ, ಹರಪನಹಳ್ಳಿ, ಕದ್ರಾ, ಧರ್ಮಸ್ಥಳ, ಮಾಣಿ, ಕಾರವಾರ, ಕುಂದಗೋಳ, ಬೆಳ್ಳಟ್ಟಿ, ಸೋಮವಾರಪೇಟೆ, ಅಂಕೋಲಾ, ಹೊನ್ನಾವರ, ಹಾರಂಗಿ, ಎಚ್ಡಿ ಕೋಟೆ, ಹುಂಚದಕಟ್ಟೆ, ಕಳಸ, ಬೆಳ್ತಂಗಡಿ, ಸಿದ್ದಾಪುರ, ಸವಣೂರು, ಶಿಗ್ಗಾಂವ್, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ಮೈಸೂರಿನಲ್ಲಿ ಮಳೆಯಾಗಿದೆ. Ad