ಮಾ.17 ನಾಳೆ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ 5 ನೇ ವಾರ್ಷಿಕೋತ್ಸವ
ಮಾ.17 ಶುಕ್ರವಾರ ಸಂಜೆ, ಸಿಪಿಎಸ್ ಶಾಲಾ ಮೈದಾನ
ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ 5 ನೇ ವಾರ್ಷಿಕೋತ್ಸವ
yadgiri, ಶಹಾಪುರಃ ಮಾ.17 ಶುಕ್ರವಾರ ಸಂಜೆ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ವಾರ್ಷಿಕೋತ್ಸವ ಅಂಗವಾಗಿ ವಿವಿಧ ಸಾಂಸ್ಕøತಿಕ, ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಮತ್ತು ಹಲವು ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ನಡೆಯಲಿದ್ದು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಹುಲಿಜಂತಿಯ ಮಾಳಿಂಗರಾಯ ಮಹಾರಾಜರು, ನಗರದ ಏಕದಂಡಗಿ ಮಠದ ಅಜೇಂದ್ರ ಮಹಾಸ್ವಾಮಿಗಳು ಮತ್ತು ಮಹಲರೋಜಾದ ಮಲ್ಲಿಕಾರ್ಜುನ ಮುತ್ಯಾವಹಿಸಲಿದ್ದಾರೆ.
ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಕರಾಗಿ ಆಗಮಿಸಲಿದ್ದು, ಮಾಜಿ ಶಾಸಕ ಗುರ ಪಾಟೀಲ್, ಮುಖಂಡ ಅಮೀನರಡ್ಡಿ ಪಾಟೀಲ್ ಯಾಳಗಿ, ಡಾ.ಚಂದ್ರಶೇಖರ ಸುಬೇದಾರ ಸೇರಿದಂತೆ ಇತರೆ ಪ್ರಮುಖರು ಭಾಗವಹಿಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷ ಪ್ರದೀಪ ಅಣಬಿ ಮನವಿ ಮಾಡಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಕಾರ್ಮಿಕ ಕಾರ್ಡ್, ಈ-ಶ್ರಮ ಕಾರ್ಡ್ ಉಚಿತವಾಗಿ ಮಾಡಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಕಾರ್ಮಿಕ ಕಾರ್ಡ್ ಪಡೆಯಲು ಅರ್ಹರು ಸಮರ್ಪಕ ದಾಖಲೆಗಳೊಂದಿಗೆ ಆಗಮಿಸಿ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ.