ಪ್ರಮುಖ ಸುದ್ದಿ
ಪ್ರಧಾನಿ ಮೋದಿ ವಿರುದ್ಧ ಹೋರಾಟಕ್ಕಿಳಿದ ಲಾಲು ಪುತ್ರ ನೆಲಕ್ಕುರುಳಿ ಬಿದ್ದದ್ದು ಗೊತ್ತಾ?
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ವಿರುದ್ಧ ಹೋರಾಟಕ್ಕೆ ಹೊರಟಿದ್ದ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಪುತ್ರ ಸೈಕಲ್ ಸವಾರಿ ವೇಳೆ ಆಯತಪ್ಪಿ ಬಿದ್ದ ಘಟನೆ ನಡೆದಿದೆ. ಪಾಟ್ನಾದಿಂದ ಗಯಾದವರೆಗೆ ಸೈಕಲ್ ಯಾತ್ರೆ ಹೊರಟಿದ್ದ ಆರ್ಜೆಡಿ ಯುವ ನಾಯಕ ತೇಜ್ ಪ್ರತಾಪ್ ಯಾದವ್ ಆಕಸ್ಮಿಕವಾಗಿ ಆಯತಪ್ಪಿ ಬಿದ್ದ ಘಟನೆ ನಡೆದಿದೆ.
ತೇಜ್ ಪ್ರತಾಪ್ ವೇಗವಾಗಿ ಸೈಕಲ್ ಚಲಾಯಿಸಿದ್ದು ಸರ್ಕಲ್ವೊಂದರಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದ ವಿರುದ್ಧ ಜನಜಾಗೃತಿ ಮೂಡಿಸಲು ತೇಜ್ ಪ್ರತಾಪ್ ಸೈಕಲ್ ಯಾತ್ರೆ ಕೈಗೊಂಡಿದ್ದ ವೇಳೆ ಘಟನೆ ನಡೆದಿದ್ದು ತೇಜ್ ಪ್ರತಾಪ್ ಗೆ ಮುಜುಗರ ತಂದಿದೆ.