ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ; ಹವಾಮಾನ ಇಲಾಖೆ
ಬೆಂಗಳೂರು: ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬೀದರ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಪ್ರಕಟಿಸಿದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 30ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಬಹುದು. ಈ ಜಿಲ್ಲೆಗಳ ಪೈಕಿ ಕೆಲವು ಕಡೆ ಬಿರುಗಾಳಿ ಅಂದರೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿ ಜೊತೆಗೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಇನ್ನುಳಿದಂತೆ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲ್ಲ. ಒಣಹವೆ ಇರಲಿದ್ದು, ತಾಪಮಾನ ಹೆಚ್ಚಳವಾಗಲಿದೆ ಎಂದು ವರದಿ ಹೇಳಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಕೊಡಗು,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ. ಈ ಭಾಗದಲ್ಲಿ ಕೆಲವು ಕಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲೂ ಬಹುದು. Ad