Homeಪ್ರಮುಖ ಸುದ್ದಿವಿನಯ ವಿಶೇಷ

ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ.

ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

 

 

Related Articles

Leave a Reply

Your email address will not be published. Required fields are marked *

Back to top button