ಕರಾವಳಿ -ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಎಲರ್ಟ್ ಘೋಷಣೆ
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು ಪಶ್ಚಿಮಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಸಿದೆ.
ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಮಳೆಗಾಲ ಆರಂಭದ ಬಳಿಕ ಉತ್ತಮ ಮಳೆಯಾಗಿಲ್ಲ. ಇದೀಗ ರಾಜ್ಯದ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು ಪಶ್ಚಿಮಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಸಿದೆ.
ಕರ್ನಾಟಕ ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಬೀಳಲಿದೆ. ಈ ಮೂಲಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಭಾರೀ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರಳು ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.