ಪ್ರಮುಖ ಸುದ್ದಿHome
ಕಾಸರಗೋಡು: ಬಸ್ – ಕಂಟೈನರ್ ನಡುವೆ ಭೀಕರ ಅಪಘಾತ;ಹಲವರಿಗೆ ಗಾಯ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ಸು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸಿಗೆ ಇನ್ನೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್ಸು ಚಾಲಕ ಉಪ್ಪಳದ ಅಶ್ರಫ್ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಸಿಲುಕಿದ್ದ ಚಾಲಕನನ್ನು ನಾಗರಿಕರು ಹರಸಾಹಸದಿಂದ ಹೊರ ತೆಗೆದರು. ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತು.
ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಸಂಚಾರ ಸುಗಮಗೊಳಿಸಿದರು. ಬಸ್ಸು ತಲಪಾಡಿಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು . ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.