ಪ್ರಮುಖ ಸುದ್ದಿ
ಕೇಂದ್ರ ಸಚಿವ ಸಂಪುಟ ಸಭೆ : ಕಣಿವೆ ರಾಜ್ಯ ಕುರಿತು ಮಹತ್ವದ ನಿರ್ಣಯ?
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು ಕಣಿವೆ ರಾಜ್ಯದ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು ಭಾರೀ ಸೇನೆಯನ್ನು ನಿಯೋಜಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸೇರಿ ಇತರರಿಗೆ ಗೃಹ ಬಂಧನ ವಿಧಿಸಲಾಗಿದ್ದು ರಾಜ್ಯದಲ್ಲಿ ನಿಷೇದಾಗ್ನೆ ಜಾರಿಗೊಳಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದ್ದು ಅಮರನಾಥ ಯಾತ್ರೆ ರದ್ದು ಮಾಡಿ ಪ್ರವಾಸಿಗರು ಕಾಶ್ಮೀರ ತೊರೆಯುವಂತೆ ಸೂಚಿಸಲಾಗಿದೆ.
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇಂದಿನ ಸಚಿವ ಸಂಪುಟದಲ್ಲಿ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.