ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್: ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

(Embroidery Training) ನಿರುದ್ಯೋಗಿ ಯುವತಿಯರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ವತಿಯಿಂದ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು, ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತು ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ ಉಚಿತ ತರಬೇತಿಯನ್ನು ಆಯೋಜಿಸಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯೂ 30 ದಿನಗಳ ಉಚಿತವಾಗಿದ್ದು, ನವೆಂಬರ್ 05 ರಿಂದ ಆರಂಭವಾಗಲಿದೆ. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 08 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.