ಪ್ರಮುಖ ಸುದ್ದಿ
ಜೇವರಗಿ : 13ಕೋಟಿ ರೂ. ವೆಚ್ಚದಲ್ಲಿ ಕಟ್ಟಿಸಂಗಾವಿ ಡ್ಯಾಮ್ ನಿರ್ಮಾಣ
ಕಲಬುರಗಿ: ಜೇವರಗಿ ತಾಲೂಕಿನ ಕಟ್ಟಿಸಂಗಾವಿ ಸಮೀಪ ಭೀಮಾನದಿಗೆ 13 ಕೋಟಿ ರೂಪಾಯಿ ವೆಚ್ಚದಲ್ಲಿ ವೆಂಟೆಡ್ ಡ್ಯಾಂ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು ಮುಂಬರುವ ಬೇಸಿಗೆಗಾಲದ ಸಮಯಕ್ಕೆ ಡ್ಯಾಂ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜೇವರಗಿ ಶಾಸಕ ಡಾ.ಅಜಯಸಿಂಗ್ ತಿಳಿಸಿದ್ದಾರೆ. ಜೇವರಗಿ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.