ಪ್ರಮುಖ ಸುದ್ದಿ
ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೊದಲನೆ ಮಹಡಿಯಿಂದ ಜಿಗಿದು ಪರಾರಿ
ಕಲಬುರ್ಗಿಃ ಆಸ್ಪತ್ರೆಗೆ ದಾಖಲಾಗಿದ್ದ ಓರ್ವ ವ್ಯಕ್ತಿ ರಾತ್ರಿ ವೇಳೆ ಮೊದಲನೇ ಮಹಡಿಯಿಂದ ಜಿಗಿದು ಪರಾರಿಯಾದ ಘಟನೆ ನಗರದ ವಾತ್ಸಲ್ಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಹೊಲದಲ್ಲಿ ಕಳೆದ ವಾರದಿಂದ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ವಿಷ ಮೈಗೇರಿರುವ ಕಾರಣ ಅಸ್ವಸ್ಥಗೊಂಡಿದ್ದ ಎನ್ನಲಾಗಿದೆ. ಹೀಗಾಗಿ ರವಿವಾರ ಮದ್ಯಾಹ್ನ ಆಸ್ಪತ್ರೆಗೆ ಬಂದು ದಾಖಲಾಗಿದೆ.
ಈತ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ನಿವಾಸಿ ಎನ್ನಲಾಗಿದ್ದು. ಹೆಸರು ಮಾಳಪ್ಪ ಎಂದು ನಮೂದಿಸಿದ್ದ ಎನ್ನಲಾಗಿದೆ. ರಾತ್ರಿ ಮಹಡಿಯಿಂದ ಜಿಗಿದು ಪರಾರಿಯಾಗಿರಲು ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಂ.ಬಿ.ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.