ಪ್ರಮುಖ ಸುದ್ದಿ
ಆಪರೇಷನ್ ಕಮಲದ ಬಗ್ಗೆಯೂ ತನಿಖೆ ಆಗಲಿ – ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು : ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಸಿಬಿಐ ತನಿಖಾ ಸಂಸ್ಥೆ ಮೇಲೆ ವಿಶ್ವಾಸವಿದೆ, ನಿಷ್ಪಕ್ಷಪಾತ ತನಿಖೆ ಆಗಲಿ. ಕೇವಲ ರಾಜಕೀಯ, ಬೆದರಿಕೆಗೆ, ವಿರೋಧಿಗಳ ಹತ್ತಿಕ್ಕುವ ನಿಟ್ಟಿನಲ್ಲಿ ಸಿಬಿಐ ಅಸ್ತ್ರ ಬಳಕೆ ಆಗಬಾರದು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದೇ ವೇಳೆ ಫೋನ್ ಕದ್ದಾಲಿಕೆ ಜೊತೆಗೆ ಆಪರೇಷನ್ ಕಮಲದ ಬಗ್ಗೆಯೂ ತನಿಖೆ ಆಗಲಿ. ಅಧಿಕಾರಕ್ಕಾಗಿ ಏನೆಲ್ಲಾ ನಡೆದಿದೆ ಎಂಬುದೂ ಬಹಿರಂಗ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ.