ಪ್ರಮುಖ ಸುದ್ದಿ
ಕೋವಿಡ್ ಸೆಂಟರ್ ಗೆ ಶಾಸಕ ಖರ್ಗೆ ಭೇಟಿ
ಚಿತಾಪುರಃ ನಗರದ ನಾಗಾವಿ ಕ್ಯಾಂಪಸ್ ನಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಸೆಂಟರ್ ಗೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸೋಂಕಿತರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸುವ ಜೊತೆಗೆ ಧೈರ್ಯ ತುಂಬಿದರು. ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಆದಷ್ಟು ಬೇಗ ಗುಣಮುಖರಾಗಲಿದ್ದೀರಿ ಯಾರೊಬ್ಬರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಮತ್ತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಉತ್ತಮ ಉಟೋಪಾಚಾರ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸುವಂತೆ ಸೂಚಿಸಿದರು. ಯಾವುದೆ ತೊಂದರೆಯಾಗದಂತೆ ಎಚ್ಚರಿಕೆವಹಿಸಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ವೈದ್ಯರ ಸಲಹೆ ಮೇರೆಗೆ ಸುರಕ್ಷಾ ಕವಚ ಧರಿಸಿಕೊಂಡಿದ್ದರು.