85 ನೇ ಸಾಹಿತ್ಯ ಸಮ್ಮೇಳನ ಃ ಕಕ ಅಭಿವೃದ್ಧಿ ವಿಷಯದಲ್ಲಿ ಟೀಕೆ ಬೇಡ- ಖರ್ಗೆ
ಕಲಬುರ್ಗಿಃ ಕಲ್ಯಾಣ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಟೀಕೆ ಟಿಪ್ಪಣಿ ಸರಿಯಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಗೆ ಎಲ್ಲರೂ ಕಟಿಬದ್ಧರಾಗಿರಬೇಕು ಎಂದು ಮಾಜಿ ಕೇಂದ್ರ ಸಚಿವ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರ್ಗಿ ವಿಶ್ವ ವಿದ್ಯಾಲಯ ಆವರಣದಲ್ಲಿ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ನಡೆದ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ 2 ನೇ ದಿನದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಏಕಿಕರಣಗೊಂಡು 6 ದಶಕಗಳ ಕಳೆದರೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಹೀಗಾಗಿ ಈ ಭಾಗ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು. ರಾಜ್ಯದ ನಾಲ್ಕು ಭಾಗಗಳಿಗೂ ಸಮಾನವಾಗಿ ಅಭಿವೃದ್ಧಿ ಯಾಗಬೇಕು.
ಈಗಾಗಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ 371 (ಜೆ) ಮೀಸಲಾತಿ ಸಿಕ್ಕಿದ್ದು, ಈ ಭಾಗದ ಎಲ್ಲರಿಗೂ ಒಂದಲ್ಲ ಒಂದು ರೀತಿ ಅನುಕೂಲವಾದಂತಾಗಿದೆ. ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನ ಪರಮೋಚ್ಛ ಗ್ರಂಥ. ಪ್ರಜಾಪ್ರಭುತ್ವಕ್ಕೆ ಕುಂದುಂಟು ಮಾಡುವ ಘಟನೆಗಳು ನಡೆದಲ್ಲಿ ಪ್ರಜ್ಞಾವಂತ ನಾಗರಿಕರು, ಸಾಹಿತಿಗಳು, ಬರಹಗಾರರು ಅದನ್ನು ವಿರೋಧಿಸುವ ಮೂಲಕ ಪ್ರಜಾಪ್ರಭುತ್ವ ವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಖರ್ಗೆ ಅವರು ಸನ್ಮಾನಿಸಿದರು.