ಪ್ರಮುಖ ಸುದ್ದಿ
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ನಾಯಕರಿಂದ ಮಹತ್ವದ ಸಭೆ
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಭೆ ಸೇರಿ ಉಪಚುನಾವಣೆಗೆ ರಣತಂತ್ರ ಹೆಣೆಯಲಾಗಿದೆ. ಕಾಂಗ್ರೆಸ್ ಪಕ್ಷದ ಹೊಸ ಅಬ್ಯರ್ಥಿಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದ್ದು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅತೃಪ್ತ ಶಾಸಕರು ಹಾಗೂ ಬಿಜೆಪಿಗೆ ಮುಖಭಂಗ್ ಮಾಡಲು ನಿರ್ಧರಿಸಲಾಗಿದೆ.
ಶತಾಯಗತಾಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕೆಂಬುದು ರಾಜ್ಯದ ಎಲ್ಲಾ ನಾಯಕರ ಒನ್ ಪಾಯಿಂಟ್ ಅಜಂಡಾ ಆಗಿದೆ ಎಂದು ತಿಳಿದು ಬಂದಿದೆ. ಮಾಜಿ ಸಿಎಂ ಸಿದ್ಧರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅದ್ಯಕ್ಷ ದಿನೇಶ ಗುಂಡೂರಾವ್, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ಸೇರಿ ಪ್ರಮುಖ ನಾಯಕರು ಸುದೀರ್ಘವಾಗಿ ಚರ್ಚಿಸಿ ಉಪಚುನಾವಣೆ ಗೆಲ್ಲುವ ರಣತಂತ್ರ ಹೂಡಿದ್ದಾರೆ ಎಂದು ತಿಳಿದು ಬಂದಿದೆ.