ಬಿಜೆಪಿ ನಾಯಕರನ್ನು ಎದುರಿಸುವ ಶಕ್ತಿ ರಾಹುಲ್ ಗೆ ಮಾತ್ರ -ಗುಂಡುರಾವ್
ಬೆಂಗಳೂರಃ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಎದುರಿಸುವ ಶಕ್ತಿ ದೇಶದಲ್ಲಿ ರಾಹುಲ್ ಗಾಂಧಿಯವರಿಗಿದೆ. ಆದರೆ ಬಿಜೆಪಿಯವರು ಅದನ್ನು ಗೇಲಿ ಮಾಡುವ ಮೂಲಕ ಎದೆಗುಂದುವಂತೆ ಮಾಡುವ ಹುನ್ನಾರ ನಡೆಸಿದ್ದಾರೆ. ಅವರ ತಂತ್ರಗಾರಿಕೆ ಯಶಸ್ವಿಯಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದ್ದಾರೆ.
ಬುಧವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಭಾವನಾತ್ಮಕ ವಿಷಯಗಳ ಮೇಲೆ ಹೇಳಿಕೆ ನೀಡುವ ಮೂಲಕ ಜನರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ ಆರೋಪಿಸಿದರು. ರಾಜಕೀಯ ಇತಿಹಾಸದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಯಾರು ಮಾಡಿರಲಿಲ್ಲ ಎಂದು ಟೀಕಿಸಿದರು.
ಅಲ್ಲದೆ ವಿಪಕ್ಷದ ನಾಯಕರ ಮೇಲೆ ಐಟಿ ದಾಳಿ ನಡೆಸುವ ಮೂಲಕ ಭಯ ಹುಟ್ಟಿಸುತ್ತಿದ್ದಾರೆ ಅಲ್ಲದೆ ಮಾಧ್ಯಮಗಳಿಗೂ ಈ ಕುರಿತು ಭಯ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಡವಳಿಕೆಯಿಂದ ಬಿಜೆಪಿಯ ಹಿರಿಯ ನಾಯಕೇ ಬೇಸತ್ತಿದ್ದಾರೆ ಎಂದ ಅವರು,
ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ
ಮೈತ್ರಿ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಆದರೆ ಯಡಿಯೂರಪ್ಪ, ಆಷಾಡ ಮುಗಿದ ಬಳಿಕ ಸರ್ಕಾರ ಪತನ’ ಎಂಬ ಹೇಳಿಕೆಗೆ ನೀಡಿರುವುದರ ಉದ್ದೇಶ ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಪತನ ಮಾಡುವ ಹುನ್ನಾರ ನಡೆಸಿದಂತೆ ಕಾಣುತ್ತಿದೆ. ಹೀಗಾಗಿ ಅವರು ಆ ರೀತಿ ಹೇಳಿಕೆ ನೀಡಿರಬಹುದು ಎಂದು ದಿನೇಶ ಗುಂಡೂರಾವ್ ಹೇಳಿದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಬಗ್ಗೆ ವರಿಷ್ಠರು ತೀರ್ಮಾನಿಸಿದ್ದು, ಅದಕ್ಕೆ ಇಬ್ಬರೂ ಬದ್ಧರಾಗಿರಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಅವರು ಬೆಂಬಲ ನೀಡಬೇಕು. ಜೆಡಿಎಸ್ ಸ್ಪರ್ಧಿಸಿದ ಕಡೆ ಕಾಂಗ್ರೆಸ್ ಸಹ ಬೆಂಬಲ ನೀಡಬೇಕಾಗುತ್ತದೆ ಎಂದರು.