ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ
2021-22 ಸಾಲಿನ ಕೃಷಿ ಅಭಿಯಾನ
ಯಾದಗಿರಿಃ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಯಾದಗಿರಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಂಟಿಯಾಗಿ ಚಾಲನೆ ನೀಡಿದರು.
ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಚಾರಿ ಕೃಷಿ ಮಾಹಿತಿ ಘಟಕವನ್ನು ಬಳಸಿಕೊಂಡು ಬೀಜೋಪಚಾರ, ಸಸ್ಯ ಸಂರಕ್ಷಣದ ಕುರಿತ ಆಂದೋಲನ ಇದಾಗಿದೆ. ಕೃಷಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯತಿಗಳನ್ನು ಒಳಗೊಂಡಂತೆ ಮೂರು ದಿನಗಳ ಕಾಲ ಪ್ರಚಾರ ಕೈಗೊಳ್ಳುವ ಹಾಗೂ ರೈತರ- ವಿಜ್ಞಾನಿಗಳ ಜೊತೆ ಸಂವಾದ ಏರ್ಪಡಿಸುವ ಕಾರ್ಯಕ್ರಮ ಇದಾಗಿದೆ ಎಂದು ವಿವರಿಸಲಾಯಿತು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ದೇವಿಕಾ ಆರ್, ಕೃಷಿ ಉಪನಿರ್ದೇಶಕ ಡಾ.ಬಾಲರಾಜ್ ರಂಗರಾವ್, ಸಹಾಯಕ ಕೃಷಿ ನಿರ್ದೇಶಕ ಶ್ವೇತಾ, ಸುರಪುರ ಸಹಾಯಕ ಕೃಷಿ ನಿರ್ದೇಶಕ ಗುರುನಾಥ, ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಸುನಿಲ್ ಕುಮಾರ, ಜಂಟಿ ಕೃಷಿ ಕಛೇರಿಯ ತಾಂತ್ರಿಕ ಅಧಿಕಾರಿ ರಾಜಕುಮಾರ ಇನ್ನಿತರರು ಉಪಸ್ಥಿತರಿದ್ದರು.