ಪ್ರಮುಖ ಸುದ್ದಿ

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅಜಿ೵ ಆಹ್ವಾನ

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅಜಿ೵ ಆಹ್ವಾನ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 641, ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವೇತನ: ಭಾರತ ಸರ್ಕಾರದ ನಿಯಮಗಳ ಅನ್ವಯ ₹ 21,700 ಆರಂಭಿಕ ವೇತನ ನೀಡಲಾಗುವುದು. ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷದವರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ವಿವರ: ಸಾಮಾನ್ಯ / ಒಬಿಸಿ ವರ್ಗಗಳಿಗೆ ₹ 1000. ಹಾಗೂ ಮಹಿಳಾ / ಎಸ್ಸಿ / ಎಸ್ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 300. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ hಣಣಠಿs://ತಿತಿತಿ.iಚಿಡಿi.ಡಿes.iಟಿ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 10 ಜನೇವರಿ 2022 ಕೊನೆಯ ದಿನವಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button